CISF Head Constable Recruitment 2025CISF Head Constable Recruitment 2025 : ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಹೆಡ್ ಕಾನ್ಸ್ಟೇಬಲ್ ನೇಮಕಾತಿ ಗೆ ಅರ್ಜಿ ಅಹ್ವಾನ.
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಯಲ್ಲಿ ಖಾಲಿ ಇರುವ ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 403 ಹುದ್ದೆಗಳು, ಅದರಲ್ಲಿ 204 ಪುರುಷ ಮತ್ತು 199 ಮಹಿಳಾ ಕಾನ್ಸ್ಟೇಬಲ್ ಹುದ್ದೆಗಳು ಖಾಲಿಯಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು 30 ಜೂನ್ 2025ರ ಒಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕದ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಏಕೆಂದರೆ ಎಲ್ಲರೂ ಕೊನೆಯಲ್ಲಿ ಅರ್ಜಿ ಸಲ್ಲಿಸಲು ಬಯಸಿದರೆ, ವೆಬ್ಸೈಟ್ ಬ್ಯುಸಿ ಅಥವಾ ತಾಂತ್ರಿಕ ತೊಂದರೆ ಉಂಟಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಮುಂಚಿತವಾಗಿ ಅರ್ಜಿ ಸಲ್ಲಿಸಿ ಈ ತೊಂದರೆಯಿಂದ ಪಾರಾಗಬಹುದು. ದ್ವಿತೀಯ ಪಿಯುಸಿ(PUC) ಪಾಸಾಗಿರುವ ಎಲ್ಲರೂ ಸಹ ಅರ್ಜಿ ಹಾಕಬಹುದು. ಅರ್ಜಿ ಸಲ್ಲಿಕೆ ಪ್ರಕ್ರಿಯೆ 18 ಮೇ 2025 ಇಂದ ಆರಂಭವಾಗಿದೆ. ಈ ಲೇಖನದಲ್ಲಿ ನಾವು cisf ನ Head Constable ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ಹೇಗೆ, ಏಲ್ಲಿ ಮತ್ತು ಬೇಕಾಗಿರುವ ವಿದ್ಯಾರ್ಹತೆ ಮತ್ತು ವಯೋಮಿತಿ, ಪ್ರಮುಖ ದಾಖಲೆಗಳು, ಅರ್ಜಿ ಶುಲ್ಕ, ವೇತನ ಶ್ರೇಣಿ ಹೀಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಲೇಖನ ಪೂರ್ತಿಯಾಗಿ ಓದಿಕೊಂಡು ಸರಿಯಾದ ಕ್ರಮದಲ್ಲಿ ಅರ್ಜಿ ಸಲ್ಲಿಸಿ.
CISF Head Constable Recruitment 2025 : ಹೆಡ್ ಕಾನ್ಸ್ಟೇಬಲ್ ನೇಮಕಾತಿಯ ಸಂಪೂರ್ಣ ಮಾಹಿತಿ.

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಯಲ್ಲಿ ಖಾಲಿ ಇರುವ 403 ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಕರೆದಿದ್ದು, ಆಸಕ್ತಿಯುಳ್ಳ ಅರ್ಹ ಮಹಿಳಾ ಮತ್ತು ಪುರುಷರು ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿದೆ. ಇದರ ಬಗ್ಗೆ ಸಂಪೂರ್ಣ ವಿವರವನ್ನು ನೋಡೋಣ.
- ಸಂಸ್ಥೆಯ ಹೆಸರು : ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF).
- ಹುದ್ದೆಯ ಹೆಸರು : ಹೆಡ್ ಕಾನ್ಸ್ಟೇಬಲ್ (Head Constable).
- ಒಟ್ಟು ಹುದ್ದೆಗಳು : 403.
- ಹುದ್ದೆಗಳ ವಿಂಗಡಣೆ : 204 ಪುರುಷ ಮತ್ತು 199 ಮಹಿಳಾ ಕಾನ್ಸ್ಟೇಬಲ್ ಹುದ್ದೆಗಳು.
- ಅರ್ಜಿ ಸಲ್ಲಿಕೆ ಪ್ರಾರಂಭ : 18 ಮೇ 2025.
- ಕೊನೆಯ ದಿನಾಂಕ : 30 ಜೂನ್ 2025.
- ಶೈಕ್ಷಣಿಕ ಅರ್ಹತೆ : ದ್ವಿತೀಯ ಪಿಯುಸಿ (PUC).
- ವೇತನ ಶ್ರೇಣಿ : ಮಾಸಿಕ ರೂ.21,700 ರಿಂದ 69,100.
- ಅರ್ಜಿ ಶುಲ್ಕ : ಸಾಮಾನ್ಯ(General)ಮತ್ತು ಒಬಿಸಿ(OBC) ರೂ.100.
- ಆಯ್ಕೆ ವಿಧಾನ : ಲಿಖಿತ ಪರೀಕ್ಷೆ.(Exam).
- ದೈಹಿಕ ಪರೀಕ್ಷೆ (PST).
- ದಾಖಲೆ ಪರಿಶೀಲನೆ.(Documents verification).
- ವೈದ್ಯಕೀಯ ಪರೀಕ್ಷೆ (Medical Exam).
- ವಯೋಮಿತಿ : 18 ರಿಂದ 23 ವರ್ಷಗಳು.
ವಯೋಮಿತಿ ಸಡಿಲಿಕೆ ಬಯಸುವ ಅಭ್ಯರ್ಥಿಗಳು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ನ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬಹುದು. CISF ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಇಲ್ಲಿ ಕ್ಲಿಕ್ ಮಾಡಿ.
Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
CISF Head Constable Recruitment 2025 : ಹುದ್ದೆಗಳ ವಿದ್ಯಾರ್ಹತೆ ಮತ್ತು ವಯೋಮಿತಿ ವಿವರಗಳು.

CISF Head Constable Recruitment 2025 : ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಯಲ್ಲಿ ಖಾಲಿ ಇರುವ 204 ಪುರುಷ ಮತ್ತು 199 ಮಹಿಳಾ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಶೈಕ್ಷಣಿಕ ಅರ್ಹತೆಯನ್ನು ನೋಡೋಣ.
- ಶೈಕ್ಷಣಿಕ ಅರ್ಹತೆ (Education Qualification) :
Cisf ನ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ದ್ವಿತೀಯ ಪಿಯುಸಿ (Second PUC) ಪಾಸಾಗಿರಬೇಕು. ಜೊತೆಗೆ ಅಂತಾರಾಷ್ಟ್ರೀಯ ಅಥವಾ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದಲ್ಲಿ ಕ್ರೀಡೆಗೆ ಸಂಬಂದಿಸಿದ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ವಯೋಮಿತಿ ವಿವರ (Age Qualification) :
ವಯಸ್ಸಿನ ಮಿತಿಯನ್ನು ನೋಡುವುದಾದರೆ,
- ಕನಿಷ್ಠ ವಯಸ್ಸು 18 ವರ್ಷ.
- ಗರಿಷ್ಠ ವಯಸ್ಸು 23 ವರ್ಷಗಳು.
- ಪರಿಶಿಷ್ಟ ಜಾತಿ ವರ್ಗಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇದೆ.
- ಒಬಿಸಿ(OBC) ವರ್ಗಕ್ಕೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಮೇಲಿನ ವಯಸ್ಸಿನ ಮಿತಿಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ. ಉದ್ಯೋಗ ಪಡೆಯಲು ಅವಕಾಶ ಇರುತ್ತದೆ. ಹೆಚ್ಚಿನ ಮಾಹಿತಿಯನ್ನು ಪಡೆಯಲು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬಹುದು. CISF ನ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಇಲ್ಲಿ ಕ್ಲಿಕ್ ಮಾಡಿ.
CISF Head Constable Recruitment 2025 : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಯಲ್ಲಿ ಖಾಲಿ ಇರುವ 403 ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳನ್ನು ನೋಡೋಣ.
- ಆಧಾರ್ ಕಾರ್ಡ್ (Aadhar Card).
- ಚುನಾವಣಾ ಗುರುತಿನ ಚೀಟಿ (Election Identity Card).
- ಪಡಿತರ ಚೀಟಿ (Ration card).
- ಜಾತಿ ಪ್ರಮಾಣ ಪತ್ರ (Caste Certificate).
- ಆದಾಯ ದೃಡೀಕರಣ ಪತ್ರ (Income Certificate).
- ಎಸ್.ಎಸ್.ಎಲ್.ಸಿ ಅಂಕಪಟ್ಟಿ (SSLC Marks card).
- ಪಿಯುಸಿ ಅಂಕಪಟ್ಟಿ (PUC marks card).
- ನಡತೆ ಪ್ರಮಾಣ ಪತ್ರ.
ಇವೆಲ್ಲಾ ದಾಖಲೆಗಳನ್ನು ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
CISF Head Constable Recruitment 2025 : ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ.

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಯಲ್ಲಿ ಖಾಲಿ ಇರುವ 204 ಪುರುಷ ಮತ್ತು 199 ಮಹಿಳಾ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನವನ್ನು ನೋಡೋಣ.
- ಮೊದಲಿಗೆ CISF ನ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬೇಕು.
- ಮುಖಪುಟ ತೆರೆದ ನಂತರ ನಿಮ್ಮ ಇಮೇಲ್ ಐಡಿ ಹಾಕಿ.
- ನಂತರ ಮೊಬೈಲ್ ನಂಬರ್ ಹಾಕಿ.
- ಮೊಬೈಲ್ ನಂಬರ್ ಗೆ ಬರುವ OTP ಹಾಕಿ, ಪಾಸ್ ವರ್ಡ್ ಸೆಟ್ ಮಾಡಿ ರಿಜಿಸ್ಟರ್ ಮಾಡಬೇಕು.
- ರಿಜಿಸ್ಟರ್ ಆದಮೇಲೆ ಮತ್ತೊಮ್ಮೆ ಲಾಗಿನ್ ಮಾಡಬೇಕು.
- ಅಪ್ಲಿಕೇಶನ್ ಓಪನ್ ಆದಮೇಲೆ ನಿಮ್ಮ ವೈಯಕ್ತಿಕ ವಿವರಗಳನ್ನು ಎಂಟ್ರಿ ಮಾಡಿ.
- ನಿಮ್ಮ ಶೈಕ್ಷಣಿಕ ವಿವರವನ್ನು ನಮೂದಿಸಿ.
- ಕೇಳಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಿ.
- ನಂತರ ಅರ್ಜಿ ಶುಲ್ಕ ಪಾವತಿ ಮಾಡಿ, ರಶೀದಿಯನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಬೇಕು.
- ನೀಡಿರುವ ಎಲ್ಲಾ ಮಾಹಿತಿಯನ್ನು ಪರಿಶೀಲನೆ ಮಾಡಬೇಕು.
- ಎಲ್ಲಾ ಮಾಹಿತಿ ಸರಿಯಾಗಿ ಇದ್ದರೆ, ಅರ್ಜಿ ಸಲ್ಲಿಸು ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಆಮೇಲೆ ಅಪ್ಲಿಕೇಶನ್ ಅನ್ನು ಪ್ರಿಂಟ್ ಓಟ್ ತೆಗೆದುಕೊಳ್ಳಿ.
ಗಮನಿಸಿ, ನೀವು ರಿಜಿಸ್ಟರ್ ಮಾಡುವಾಗ ನೀಡಿರುವ ಇಮೇಲ್ ಐಡಿ ಮತ್ತು ಪಾಸ್ ವರ್ಡ್ ಅನ್ನು ಯಾವುದೇ ಕಾರಣಕ್ಕೂ ಮರೆಯಬೇಡಿ. ಒಂದು ಡೈರಿಯಲ್ಲಿ ಬರೆದು ಇಡಿ. ಏಕೆಂದರೆ ಮುಂದೆ ನೀವು ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಈ email ID ಮತ್ತು Password ಕಡ್ಡಾಯವಾಗಿ ಬೇಕು.
ವಿಶೇಷ ಸೂಚನೆ : “Tharak7starnews15.com” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.