KSRTC Bus Pass : ಪಡೆಯಲು ಅರ್ಜಿ ಅಹ್ವಾನ.

KSRTC Bus Pass

KSRTC Bus Pass ರಾಜ್ಯ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ರಿಯಾಯಿತಿ ಮತ್ತು ಉಚಿತ ಬಸ್ ಪಾಸ್ ವಿತರಿಸಲು ಅರ್ಜಿ ಆಹ್ವಾನಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 2025-26 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಯಾಣಿಸಲು ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಬಸ್ ಪಾಸ್ ವಿತರಣೆ ಮಾಡಲು ಮುಂದಾಗಿದೆ. ವಿದ್ಯಾರ್ಥಿಗಳಿಗೆ ರಿಯಾಯಿತಿ ಮತ್ತು ಉಚಿತ ಬಸ್ ಪಾಸ್ ವಿತರಿಸಲು ಅರ್ಜಿ ಆಹ್ವಾನಿಸಿದೆ. ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಮತ್ತು ರಿಯಾಯಿತಿ ದರದ ಬಸ್ ಪಾಸ್ ನೀಡುವ ಕಾರ್ಯಕ್ಕೆ KSRTC ಸಂಸ್ಥೆ ಮುಂದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 2017-18 ನೇ ಸಾಲಿನಿಂದ ಉಚಿತ ಪ್ರಯಾಣ ಪಾಸ್ ನೀಡಲಾಗುತ್ತಿದೆ. ಅರ್ಜಿಗಳನ್ನು ಸಲ್ಲಿಸಲು ನಿಮ್ಮ ಹತ್ತಿರದ CSC ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡಬಹುದು. ಸೇವಾ ಸಿಂಧು ಪೋರ್ಟೆಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಈ ಲೇಖನದಲ್ಲಿ ನಾವು ಅರ್ಜಿ ಸಲ್ಲಿಸುವ ವಿಧಾನ, ಹೇಗೆ, ಏಲ್ಲಿ ಸಲ್ಲಿಸಬೇಕು ಮತ್ತು ಬೇಕಾಗುವ ಪ್ರಮುಖ ದಾಖಲೆಗಳು, ಹೀಗೆ ಸಂಬಂದಿಸಿದ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಲೇಖನ ಪೂರ್ತಿ ಓದಿಕೊಂಡು ಸರಿಯಾದ ಕ್ರಮದಲ್ಲಿ ಅರ್ಜಿ ಸಲ್ಲಿಸಿ.

KSRTC Bus Pass ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

KSRTC Bus Pass
KSRTC Bus Pass

KSRTC Bus Pass : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 2025-26 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಯಾಣಿಸಲು ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಬಸ್ ಪಾಸ್ ವಿತರಣೆ ಮಾಡಲು ಮುಂದಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶಗಳಿಗೆ ಬರಲು ಇದು ಸಹಾಯವಾಗಲಿದೆ. ಅನೇಕ ಜನ ಬಡ ಮಕ್ಕಳಿಗೆ ಶಿಕ್ಷಣ ಮುಂದುವರೆಸಲು ಸಹಾಯವಾಗಲಿದೆ.

ಗ್ರಾಮೀಣ ಪ್ರದೇಶದಲ್ಲಿ ಉನ್ನತ ವಿದ್ಯಾಭ್ಯಾಸ ಮಾಡಲು ಉತ್ತಮ ಶಿಕ್ಷಣ ಸಂಸ್ಥೆಗಳು ಇರುವುದಿಲ್ಲ. ಹಾಗಾಗಿ ಉನ್ನತ ಶಿಕ್ಷಣವನ್ನು ಪಡೆಯಲು ವಿದ್ಯಾರ್ಥಿಗಳು ನಗರ ಪ್ರದೇಶಗಳಿಗೆ ಬರಬೇಕಾಗುತ್ತದೆ. ಆದರೇ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅನೇಕ ಕುಟುಂಬಗಳು ಸರ್ವೇ ಸಾಮಾನ್ಯ ಬಡತನ ಮತ್ತು ಹಿಂದುಳಿದ ವರ್ಗದವರಾಗಿರುತ್ತಾರೆ. ಇವರು ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಾ ಇರುತ್ತಾರೆ. ಇರುವ ಅಲ್ಪ ಸ್ವಲ್ಪ ಜಮೀನಿನಲ್ಲಿ ಜೀವನ ಸಾಗಿಸುತ್ತಾ ಬದುಕು ನಡೆಸುತ್ತಿದ್ದಾರೆ. ಇವರ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಆಸೆ ಇದ್ದರು ಸಹ ಬಡತನ ಅವರನ್ನು ಕಟ್ಟಿಹಾಕುತ್ತದೆ.

ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಸಹಾಯ ಮಾಡಲು ಕರ್ನಾಟಕ ರಾಜ್ಯ ಸರ್ಕಾರ ಅನೇಕ ರೀತಿಯ ಯೋಜನೆಗಳನ್ನು ಜಾರಿಗೆ ತಂದಿದೆ. ಹಳ್ಳಿಮನೆಯಲ್ಲಿನ ಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆಯಲು ಆರ್ಥಿಕ ಸಹಾಯ ಮಾಡುವ ದೃಷ್ಟಿಯಲ್ಲಿ ಸರ್ಕಾರ ಬಸ್ ಪಾಸ್ ನೀಡುವ ಯೋಜನೆ ಜಾರಿಗೆ ತಂದಿದೆ. ಅದರಲ್ಲೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಕ್ಕಳು ಹೆಚ್ಚಿನ ವಿದ್ಯಾಭ್ಯಾಸ ಪಡೆಯಲು ನಗರಕ್ಕೆ ಬರಬೇಕು. ಆದರೇ ಇವರು ಆರ್ಥಿಕವಾಗಿ ಕಷ್ಟದಲ್ಲಿ ಜೀವನ ಸಾಗಿಸುತ್ತಾ ಇರುತ್ತಾರೆ. ಹಾಗಾಗಿ ಹೆಚ್ಚಿನ ಶಿಕ್ಷಣ ಪಡೆಯಲು ಸಾಧ್ಯ ಆಗುವುದಿಲ್ಲ.ಅವರ ಅನುಕೂಲಕ್ಕೆ ಸರ್ಕಾರ ಉಚಿತ ಬಸ್ ಪಾಸ್ ಒದಗಿಸಲು ಮುಂದಾಗಿದೆ.

ಸಾಮಾನ್ಯ ಸೇವಾ ಕೇಂದ್ರ (CSC) ಯ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ವಿದ್ಯಾರ್ಥಿಗಳು ಸಂಬಂದಿಸಿದ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಸೇವಾಸಿಂಧೂ ಕೇಂದ್ರಕ್ಕೆ ಭೇಟಿ ಮಾಡಬಹುದು. ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಕಳೆದ ಸಾಲಿನಂತೆ ಈ ವರ್ಷ ಸಹ ಗಣಕಿಕೃತ ವ್ಯವಸ್ಥೆಯಲ್ಲಿ ಪಾಸುಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಇಲಾಖೆಯು ಹೊಸ ತಂತ್ರಜ್ಞಾನ ಅಭಿವೃದ್ಧಿ ಪಡಿಸಿದೆ. ವಿದ್ಯಾರ್ಥಿಯ ವಿವರದ ಜೊತೆಗೆ ಕುಟುಂಬದ ವಿವರಗಳು ಸಹ ದಾಖಲಾಗುತ್ತವೆ. ಪಾಸುಗಳನ್ನು ವಿತರಿಸಲು ಕರ್ನಾಟಕ ಒನ್,ಗ್ರಾಮ ಒನ್ ಕೇಂದ್ರದಲ್ಲಿ ಇದಕ್ಕಾಗಿಯೇ ಬೇರೆ ಕೌಂಟರ್ ತೆರೆದು ನೀಡಲಾಗುವುದು. ಎಂದು ಸರ್ಕಾರ ತಿಳಿಸಿದೆ.

Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KSRTC Bus Pass ವಿತರಣೆಯ ಪ್ರಮುಖ ಅಂಶಗಳು ಹೀಗಿವೆ.

KSRTC Bus Pass : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 2025-26 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಯಾಣಿಸಲು ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಬಸ್ ಪಾಸ್ ವಿತರಣೆ ಮಾಡಲು ನಿರ್ಧರಿಸಿದೆ. ಪಾಸು ವಿತರಣೆಯಲ್ಲಿ ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು ಇಲ್ಲಿವೆ.

  1. ವಿದ್ಯಾರ್ಥಿಯ ಬಸ್ ಪಾಸು ವಯಕ್ತಿಕ ಮಾಹಿತಿಯನ್ನು ಹೊಂದಿರುತ್ತದೆ.
  2. ಪಿವಿಸಿ ಕಾರ್ಡ್ ಆಗಿದ್ದು, ಹೆಸರು, ವಿಳಾಸ ಹೊಂದಿರುತ್ತದೆ.
  3. ಜೊತೆಗೆ ಭಾವಚಿತ್ರ ಮತ್ತು ಪ್ರಯಾಣಿಸುವ ಮಾರ್ಗದ ಮಾಹಿತಿ ಇರುತ್ತದೆ.
  4. ಪಾಸುಗಳು ಒಂದು ವರ್ಷದ ಕಾಲಾವಕಾಶ ಹೊಂದಿರುತ್ತವೆ.
  5. ಪ್ರತಿಯೊಂದು ಕಾರ್ಡ್ ಯೂನಿಕ್ ಸಂಖ್ಯೆ ಹೊಂದಿದೆ.
  6. ಪಿವಿಸಿ ಕಾರ್ಡ್ಗಳು QR ಕೋಡ್ ಹೊಂದಿವೆ. ಇದರಿಂದ ಪಾರದರ್ಶಕತೆ ಕಾಪಾಡಬಹುದು.

ಕರ್ನಾಟಕ ಸರ್ಕಾರ ಈಗಾಗಲೇ ಮಹಿಳೆಯರ ಕಲ್ಯಾಣ ಯೋಜನೆಯಾಗಿ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ಇದರಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ಇರುತ್ತದೆ. ಹಾಗಾಗಿ ವಿದ್ಯಾರ್ಥಿನಿಯರು ಬೇರೆ ಬಸ್ ಪಾಸ್ ಪಡೆಯುವ ಅವಶ್ಯಕತೆ ಇರುವುದಿಲ್ಲ. ನಗರ ಮತ್ತು ಗ್ರಾಮೀಣ ಪ್ರದೇಶದ ಎಲ್ಲಾ ಮಹಿಳೆಯರು ಸಹ ksrtc ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ವಿದ್ಯಾರ್ಥಿನಿಯರು ಬಸ್ ಪಾಸ್ ಪಡೆಯಲು ಇಚ್ಛೆಸಿದಲ್ಲಿ ನೀಡಲಾಗುವುದು.

ಕರ್ನಾಟಕ ರಾಜ್ಯದ ಗಡಿಭಾಗದಲ್ಲಿ ವಾಸಿಸುವ ಹೆಣ್ಣುಮಕ್ಕಳು, ಬೇರೆ ರಾಜ್ಯದಲ್ಲಿನ ಶಾಲೆ ಅಥವಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಅವರು ರಿಯಾಯಿತಿ ದರದ ಪಾಸು ಪಡೆಯಬೇಕು. ನೆರೆ ರಾಜ್ಯದ ಹೆಣ್ಣುಮಕ್ಕಳು ಕರ್ನಾಟಕ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಶಿಕ್ಷಣ ಪಡೆಯುತ್ತಿದ್ದರೆ ಅವರು ಸಹ KSRTC Bus ನಲ್ಲಿ ಪ್ರಯಾಣಿಸಲು ರಿಯಾಯಿತಿ ಪಾಸು ಪಡೆಯಲೇಬೇಕು. ಶಕ್ತಿ ಯೋಜನೆಯಲ್ಲಿಯೂ ಸಹ ಬೇರೆ ರಾಜ್ಯಕ್ಕೆ ಪ್ರಯಾಣಿಸಲು ಅವಕಾಶ ಇರುವುದಿಲ್ಲ.

ವಿದ್ಯಾರ್ಥಿಗಳ ಆಧಾರ್ ನಂಬರ್ ಅನ್ನು ನಮೂದಿಸಿದ ಹಾಗೆ ಅವರ ವಯಕ್ತಿಕ ವಿವರ ಬರುವಂತೆ ವ್ಯವಸ್ಥೆ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಆರ್.ಡಿ. ಸಂಖ್ಯೆ ಎಂಟ್ರಿ ಮಾಡಿದ ತಕ್ಷಣ ಅವರ ಮಾಹಿತಿ ಬರುವಂತೆ ವೆಬ್ಸೈಟ್ ರಚಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ಪಡೆಯಲು EDCS ನ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ. EDCS ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಇಲ್ಲಿ ಕ್ಲಿಕ್ ಮಾಡಿ.

KSRTC Bus Pass ಅರ್ಜಿ ಸಲ್ಲಿಸುವ ವಿಧಾನ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 2025-26 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಯಾಣಿಸಲು ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಬಸ್ ಪಾಸ್ ವಿತರಣೆ ಮಾಡಲು ಮುಂದಾಗಿದ್ದು, ಅರ್ಜಿ ಸಲ್ಲಿಸುವ ವಿಧಾನವನ್ನು ನೋಡೋಣ.

  • ಮೊದಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟೆಲ್ ಗೆ ಹೋಗಬೇಕು.
  • ಅಥವಾ ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಮೂಲಕ ಸಹ ಅರ್ಜಿ ಸಲ್ಲಿಸಬಹುದು.
  • ಕೇಂದ್ರದಲ್ಲಿನ ಸಿಬ್ಬಂದಿಗಳಿಗೆ ಎಲ್ಲಾ ದಾಖಲೆಗಳನ್ನು ನೀಡಿ.
  • ಅಪ್ಲಿಕೇಶನ್ ನಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಿ. 
  • ನಿಮ್ಮ ವೈಯಕ್ತಿಕ ವಿವರವನ್ನು ನಮೂದಿಸಿ.
  • ಶೈಕ್ಷಣಿಕ ವಿವರಗಳನ್ನು ಎಂಟ್ರಿ ಮಾಡಬೇಕು.
  • ಕಾಲೇಜಿನ ಸಂಪೂರ್ಣ ಮಾಹಿತಿ ನೀಡಬೇಕು.
  • ಪ್ರಯಾಣದ ಮಾರ್ಗವನ್ನು ಎಲ್ಲಿಂದ ಎಲ್ಲಿಗೆ ಎಂಬ ಮಾಹಿತಿ ನಮೂದಿಸಿ.
  • ಎಲ್ಲಾ ಮಾಹಿತಿಯನ್ನು ನೀಡಿದ ಮೇಲೆ “ಅರ್ಜಿ ಸಲ್ಲಿಸು” ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಅರ್ಜಿ ಸಲ್ಲಿಸಿದ ಮೇಲೆ ನಿಮ್ಮ ಮೊಬೈಲ್ ನಂಬರ್ ಗೆ ಪಾಸು ಪಡೆಯುವ ದಿನಾಂಕದ ಮಾಹಿತಿ ಬರುತ್ತದೆ.
  • ಯಾವ ಕಚೇರಿಯಲ್ಲಿ ಪಾಸು ಪಡೆಯಬೇಕು ಎಂಬ ಮಾಹಿತಿ ಸಹ ಇರುತ್ತದೆ.
  • ಕಚೇರಿಗೆ ತೆರಳಿ, ಶುಲ್ಕ ಪಾವತಿಸಿ bus pass ಪಡೆಯಬಹುದು.

ವಿಶೇಷ ಸೂಚನೆ : “Tharak7starnews15.com” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.

 

 

Leave a Reply

Your email address will not be published. Required fields are marked *