Indian railway recruitment 2025

Indian railway recruitment 2025

Indian railway recruitment 2025 : ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲೇಟ್ (ALP) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 9,970 ಸಹಾಯಕ ಲೋಕೋ ಪೈಲೇಟ್ (ALP) ಹುದ್ದೆಗಳ ಭರ್ತಿಗೆ ಅರ್ಜಿ ಕರೆದಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಸಿಹಿ ಸುದ್ದಿಯಾಗಿದೆ. ಅರ್ಜಿ ಸಲ್ಲಿಸಲು 09 ಮೇ 2025 ಕೊನೆಯ ದಿನಾಂಕ ಆಗಿರುತ್ತದೆ. ಕೊನೆಯ ದಿನಾಂಕ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಏಕೆಂದರೆ ಕೊನೆಯ ಸಂದರ್ಭದಲ್ಲಿ ವೆಬ್ಸೈಟ್ ಬ್ಯುಸಿ ಮತ್ತು ತಾಂತ್ರಿಕ ತೊಂದರೆ ಉಂಟಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಮುಂಚಿತವಾಗಿ ಅರ್ಜಿ ಸಲ್ಲಿಸಿದರೆ ಯಾವುದೇ ತೊಂದರೆ ಆಗುವುದಿಲ್ಲ. ಭಾರತದಲ್ಲಿ ಅತೀ ಹೆಚ್ಚು ಉದ್ಯೋಗ ನೀಡುವ ಇಲಾಖೆ ನಮ್ಮ ಭಾರತೀಯ ರೈಲ್ವೆ ಇಲಾಖೆ ಆಗಿದೆ. ಈ ಲೇಖನದಲ್ಲಿ ನಾವು ರೈಲ್ವೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ಬೇಕಾಗುವ ದಾಖಲೆಗಳು, ಪ್ರಮುಖ ದಿನಾಂಕಗಳು, ವಿದ್ಯಾರ್ಹತೆ ಮತ್ತು ವಯೋಮಿತಿ ಹಾಗೂ ಅರ್ಜಿ ಶುಲ್ಕ ಮತ್ತು ವೇತನ ಶ್ರೇಣಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ.

Indian railway recruitment 2025 : ರೈಲ್ವೆ ಹುದ್ದೆಗಳ ಸಂಪೂರ್ಣ ಮಾಹಿತಿ.

Indian railway recruitment 2025
Indian railway recruitment 2025

Indian railway recruitment 2025 : ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 9,970 ಸಹಾಯಕ ಲೋಕೋ ಪೈಲೇಟ್ (ALP) ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

  • ಇಲಾಖೆ ಹೆಸರು : ಭಾರತೀಯ ರೈಲ್ವೆ ಇಲಾಖೆ (Indian railway).
  • ಹುದ್ದೆಯ ಹೆಸರು : ಸಹಾಯಕ ಲೋಕೋ ಪೈಲೇಟ್ (ALP).
  • ಒಟ್ಟು ಹುದ್ದೆಗಳು : 9,970.
  • ವೇತನ ಶ್ರೇಣಿ : 19,900.
  • ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್ (Online).
  • ಕೊನೆಯ ದಿನಾಂಕ : 09 ಮೇ 2025.
  • ಶೈಕ್ಷಣಿಕ ಅರ್ಹತೆ : SSLC.
  • ಐಟಿಐ (ITI).
  • ಇಂಜಿನಿಯರಿಂಗ್ ಡಿಪ್ಲೋಮ.
  • ಪದವಿ.
  • ವಯೋಮಿತಿ : 18 ರಿಂದ 30 ವರ್ಷಗಳು.

ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಇಷ್ಟ ಇರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾಭ್ಯಾಸ ಮುಗಿಸಿ ಕೆಲಸ ಹುಡುಕುತ್ತಿರುವ ಯುವಕ, ಯುವತಿಯರು ಅರ್ಜಿ ಸಲ್ಲಿಸಿ. ಹೆಚ್ಚಿನ ಮಾಹಿತಿಯನ್ನು ಪಡೆಯಲು ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು.

Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

Indian railway recruitment 2025 : ರೈಲ್ವೆ ಹುದ್ದೆಗಳ ವಿದ್ಯಾರ್ಹತೆ ಮತ್ತು ವಯೋಮಿತಿ ವಿವರ.

Indian railway recruitment 2025

ಇಂಡಿಯನ್ ರೈಲ್ವೆ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಸುವರ್ಣವಕಾಶ ಆಗಿದೆ. ಯಾವುದೇ ಉನ್ನತ ಹುದ್ದೆ ಪಡೆಯಲು ಶಿಕ್ಷಣ ಅತ್ಯಂತ ಅವಶ್ಯಕವಾಗಿದೆ. ಹಾಗಾಗಿ ವಿದ್ಯಾರ್ಹತೆಯನ್ನು ನೋಡೋಣ.

ಶೈಕ್ಷಣಿಕ ಅರ್ಹತೆ (Education Qualification).

ಭಾರತೀಯ ರೈಲ್ವೆ ಇಲಾಖೆಯ ಸಹಾಯಕ ಲೋಕೋ ಪೈಲೇಟ್ (ALP) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ವಿದ್ಯಾರ್ಹತೆ ಇರಬೇಕು.

  1. ಎಸ್.ಎಸ್.ಎಲ್.ಸಿ(SSLC).
  2. ಪಿಯುಸಿ(PUC).
  3. ಯಾವುದೇ ಪದವಿ (Any Degree).
  4. ಐಟಿಐ (ITI).
  5. ಇಂಜಿನಿಯರಿಂಗ್ ಡಿಪ್ಲೋಮ (Engineering Diploma).

ಈ ಶೈಕ್ಷಣಿಕ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಲು ಅವಕಾಶ ಇದೆ. ಹೆಚ್ಚಿನ ಮಾಹಿತಿಯನ್ನು ಪಡೆಯಲು ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಭಾರತೀಯ ರೈಲ್ವೆ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಇಲ್ಲಿ ಕ್ಲಿಕ್ ಮಾಡಿ.

ವಯೋಮಿತಿ ಅರ್ಹತೆ (Age Qualification).

ಇಂಡಿಯನ್ ರೈಲ್ವೆ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಈ ವಯೋಮಿತಿ ಹೊಂದಿರಬೇಕು.

  • ಕನಿಷ್ಠ 18 ವರ್ಷಗಳು.
  • ಗರಿಷ್ಠ 30 ವರ್ಷಗಳು.

ಮೀಸಲಾತಿ ನಿಯಮದ ಪ್ರಕಾರ, ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, PWD ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

Indian railway recruitment 2025 : ಬೇಕಾಗುವ ಪ್ರಮುಖ ದಾಖಲೆಗಳು.

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 9,970 ಸಹಾಯಕ ಲೋಕೋ ಪೈಲೇಟ್ (ALP) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು.

  • ಆಧಾರ್ ಕಾರ್ಡ್ (Aadhar Card).
  • ಚುನಾವಣಾ ಗುರುತಿನ ಚೀಟಿ (Election Identity Card).
  • ಪಡಿತರ ಚೀಟಿ (Ration Card).
  • ಎಸ್.ಎಸ್.ಎಲ್.ಸಿ ಅಂಕಪಟ್ಟಿ (SSLC Marks card).
  • ಪಿಯುಸಿ ಅಂಕಪಟ್ಟಿ (PUC Marks Card).
  • ಐಟಿಐ ಅಂಕಪಟ್ಟಿಗಳು (ITI Markscard).
  • ಇಂಜಿನಿಯರಿಂಗ್ ಡಿಪ್ಲೋಮ ಅಂಕಪಟ್ಟಿ (Engineering Diploma Marks Cards).
  • ಪದವಿ ಪ್ರಮಾಣ ಪತ್ರ (Degree Certificate).

ಇವೆಲ್ಲಾ ದಾಖಲೆಗಳನ್ನು ಹೊಂದಿದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.

Indian railway recruitment 2025 : ಅರ್ಜಿ ಸಲ್ಲಿಸುವ ವಿಧಾನ.

Indian railway recruitment 2025
Indian railway recruitment 2025

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲೇಟ್ (ALP) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ನೋಡೋಣ.

  1. ಮೊದಲಿಗೆ ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಹೋಗಬೇಕು.
  2. ವೆಬ್ಸೈಟ್ ಮುಖಪುಟ ತೆರೆದ ನಂತರ ” ಲೋಕೊ ಪೈಲೇಟ್ ಅರ್ಜಿ ” ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
  3. ಆಮೇಲೆ ನಿಮ್ಮ ಮೊಬೈಲ್ ನಂಬರ್ ಹಾಕಿ ರಿಜಿಸ್ಟರ್ ಆಗಬೇಕು.
  4. OTP ಹಾಕಿ, ಪಾಸ್ ವರ್ಡ್ ಸೆಟ್ ಮಾಡಬೇಕು.
  5. ರಿಜಿಸ್ಟರ್ ಆದಮೇಲೆ ಮತ್ತೆ ಲಾಗಿನ್ ಮಾಡಬೇಕು.
  6. ಲಾಗಿನ್ ಮಾಡಿದ ಮೇಲೆ ಅಪ್ಲಿಕೇಶನ್ ಓಪನ್ ಆಗುತ್ತದೆ.
  7. ಅಪ್ಲಿಕೇಶನ್ ತೆರೆದ ಮೇಲೆ ನಿಮ್ಮ ವಯಕ್ತಿಕ ವಿವರಗಳನ್ನು ಎಂಟ್ರಿ ಮಾಡಬೇಕು.
  8. ಹೆಸರು, ವಿಳಾಸವನ್ನು ಸರಿಯಾಗಿ ನಮೂದಿಸಿ.
  9. ನಂತರ ಶೈಕ್ಷಣಿಕ ವಿವರವನ್ನು ನಮೂದಿಸಬೇಕು.
  10. ಆಮೇಲೆ ಕೇಳಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಬೇಕು.
  11. ನಂತರ ಅರ್ಜಿ ಶುಲ್ಕ ಪಾವತಿ ಮಾಡಿ, ರಶೀದಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  12. ಅಪ್ಲಿಕೇಶನ್ ಭರ್ತಿ ಮಾಡಿದ ಮೇಲೆ ನಮೂದಿಸಿದ ಎಲ್ಲಾ ಮಾಹಿತಿ ಸರಿಯಾಗಿ ಇದೆಯಾ ಎಂದು ನೋಡಬೇಕು.
  13. ಮತ್ತೊಮ್ಮೆ ಪರಿಶೀಲನೆ ಮಾಡಿದ ಮೇಲೆ submit ಬಟನ್ ಮೇಲೆ ಕ್ಲಿಕ್ ಮಾಡಿ.
  14. ಅರ್ಜಿ ಸಲ್ಲಿಸಿದ ಮೇಲೆ ಅರ್ಜಿಯನ್ನು ಪ್ರಿಂಟ್ ಓಟ್ ತೆಗೆದುಕೊಳ್ಳಿ.

ಗಮನಿಸಿ, ನೀವು ರಿಜಿಸ್ಟರ್ ಮಾಡುವಾಗ ನೀಡಿರುವ ಇಮೇಲ್ ಐಡಿ ಮತ್ತು ಪಾಸ್ ವರ್ಡ್ ಅನ್ನು ಮರೆಯಬೇಡಿ. ಯಾವುದಾದರು ಡೈರಿ ಅಥವಾ ಪುಸ್ತಕದಲ್ಲಿ ಬರೆದು ಇಡಿ. ಏಕೆಂದರೆ ಪರೀಕ್ಷೆ ಬರೆಯಲು ಅಡ್ಮಿಟ್ ಕಾರ್ಡ್ ಪ್ರಿಂಟ್ ತೆಗೆದುಕೊಳ್ಳಲು ಬೇಕಾಗುತ್ತದೆ.

Indian railway recruitment 2025 : ಅರ್ಜಿ ಶುಲ್ಕ ಮತ್ತು ವೇತನ ಶ್ರೇಣಿ ವಿವರಗಳು.

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲೇಟ್ (ALP) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಅರ್ಜಿ ಶುಲ್ಕ ಪಾವತಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಹೇಗಿದೆ ಎಂಬುದನ್ನು ನೋಡೋಣ.

ಅರ್ಜಿ ಶುಲ್ಕ ವಿವರ :

  • ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ.500 ಅರ್ಜಿ ಶುಲ್ಕ ಪಾವತಿ ಮಾಡಬೇಕು.
  • ಪರಿಶಿಷ್ಟ ಜಾತಿ ಮತ್ತು ಪಂಗಡದವರು ರೂ.250 ಶುಲ್ಕ ಪಾವತಿಸಬೇಕು.
  • PWD ಮತ್ತು ಮಾಜಿ ಸೈನಿಕರು ರೂ.250 ಅರ್ಜಿ ಶುಲ್ಕ ಪಾವತಿ ಮಾಡಬೇಕು.

ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿದೆ.

ವೇತನ ಶ್ರೇಣಿ ಮಾಹಿತಿ.

ಇಂಡಿಯನ್ ರೈಲ್ವೆ ಹುದ್ದೆಗೆ ಅರ್ಜಿ ಸಲ್ಲಿಸಿ, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳ ವೇತನ ರೂ.19.900 ಆಗಿರುತ್ತದೆ.

ವಿಶೇಷ ಸೂಚನೆ : “Tharak7starnews15.com” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.

 

 

 

Leave a Reply

Your email address will not be published. Required fields are marked *